ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ವರ್ಷದ 65ನೇ ವಾರ್ಷಿಕ ಮಹಾಸಭೆ ಸೆ.12ರಂದು ಪೂರ್ವಾಹ್ನ 10.30ಕ್ಕೆ ನೆಲ್ಯಾಡಿಯಲ್ಲಿರುವ ಸಂಘದ ಪ್ರಧಾನ ಕಚೇರಿಯ ಕಲ್ಪವೃಕ್ಷ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಯಸ್.ಉಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಲಿದ್ದು ಸಂಘದ ಸದಸ್ಯರು ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಂ.ದಯಾಕರ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.