ಸೆ.12: ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.12ರಂದು ಬೆಳಿಗ್ಗೆ 10.30ಕ್ಕೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಶುಭಪ್ರಕಾಶ ಎರಬೈಲುರವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.

ಸಂಘದ ಸರ್ವ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯ ಕಲಾಪಗಳಲ್ಲಿ ಭಾಗವಹಿಸಿ ಸಂಘದ ಬೆಳವಣಿಗೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಆಡಳಿತ ಮಂಡಳಿ ಅನುಮತಿ ಮೇರೆಗೆ ಸಂಘದ ಕಾರ್ಯದರ್ಶಿ ಅರ್ಪಣಾ ಎ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here