ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನದ ನವರಾತ್ರಿ ಉತ್ಸವದ ಆಮಂತ್ರಣ ಬಿಡುಗಡೆ

0

ಪುತ್ತೂರು: ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.3 ರಿಂದ 12ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯು ಸೆ.6ರಂದು ಶ್ರೀಕ್ಷೇತ್ರದಲ್ಲಿ ಬಿಡುಗಡೆಗೊಂಡಿತು. ಮಧ್ಯಾಹ್ನ ದೇವಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಕ್ಷೇತ್ರದ ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ಸದಸ್ಯರುಗಳು, ಅರ್ಚಕರು, ವಿಶ್ವ ಯುವಕ ವೃಂದದ ಸದಸ್ಯರುಗಳು, ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು, ನವರಾತ್ರಿ ಸೇವಾಕರ್ತರು, ಶಾಶ್ವತ ಸೇವಾಕರ್ತರು ಸೇರಿದಂತೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here