ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ಆರೋಪದ ಪ್ರಕರಣ-ಎಫ್.ಐ.ಆರ್. ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ-ಅರುಣ್ ಪುತ್ತಿಲ ಪರ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ವಾದ ಮಂಡನೆ

0

ಪುತ್ತೂರು: ಹಿಂದೂ ಸಂಘಟನೆ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಅರುಣ್ ಕುಮಾರ್ ಪುತ್ತಿಲ(Arun Kumar Puthila) ಅವರ ವಿರುದ್ಧ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖಾ ಪ್ರಕ್ರಿಯೆಗೆ ಸೆ.10ರಂದು ಹೈಕೋರ್ಟ್(High Court of Karnataka) ತಡೆಯಾಜ್ಞೆ ನೀಡಿದೆ.


ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ(Bengaluru) ಹೊಟೇಲೊಂದರಲ್ಲಿ ತನ್ನನ್ನು ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ನೀಡಿದ್ದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪಿ. ಪಿ. ಹೆಗ್ಡೆ(PP Hegde Advocate ) ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಸುಳ್ಳು ಆರೋಪ ಹೊರಿಸಲಾಗಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ, ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ. ಘಟನೆ ಒಂದು ವರ್ಷದ ಹಿಂದೆ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಈ ದೂರು ಸುಳ್ಳಿನಿಂದ ಕೂಡಿದೆ. ಅರುಣ್ ಪುತ್ತಿಲ ಅವರೊಂದಿಗೆ ಮಾತನಾಡಿದ ಆಡಿಯೋ ವೈರಲ್(

) ಆದ ಬಳಿಕ ಹಾಗೂ ಈ ವಿಚಾರಕ್ಕೆ ಸಂಬಂಧಿಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದ ನಂತರ ಅತ್ಯಾಚಾರದ ಆರೋಪವನ್ನು ಮಾಡಲಾಗಿದೆ. ಇದು ಸುಳ್ಳು ಆರೋಪವಾಗಿದ್ದು ಈ ಬಗ್ಗೆ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪಿ.ಪಿ.ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು. ಇವರ ವಾದ ಪುರಸ್ಕರಿಸಿದ ನ್ಯಾಯಮೂರ್ತಿಗಳು ಎಫ್.ಐ.ಆರ್. ಮತ್ತು ಮುಂದಿನ ತ‌ನಿಖೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here