ಪುತ್ತೂರು: ಪುತ್ತೂರು ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೆ.11 ರ ನಸುಕಿನ ಜಾವ ನಡೆದಿದೆ.
ಆಸ್ಪತ್ರೆಯ ಪ್ರವೇಶದ್ವಾರದ ಬಳಿಯ ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ತಕ್ಷಣ ನಂದಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.