ತ್ರೋಬಾಲ್‌ ಪಂದ್ಯಾಟ: ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ಪ್ರಥಮ

0

ಬೆಟ್ಟಂಪಾಡಿ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸುವ ತಾಲೂಕು ಮಟ್ಟದ ತ್ರೋಬಾಲ್‌ ಪಂದ್ಯಾಟದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ತಂಡವು, ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗುವುದರೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಿಭಾಗದಲ್ಲಿ ಇಂದ್ರಪ್ರಸ್ಥ ತಂಡವು ದ್ವಿತೀಯ ಸ್ಥಾನಿಯಾಗಿದೆ.

ಕ್ರೀಡಾಕೂಟವು ಸೆ.10 ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಜರುಗಿತು. ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎಚ್‌ಕೆ ಪ್ರಕಾಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here