ನೆಲ್ಯಾಡಿ: ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ಸೆ.10ರಂದು ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ತಂಪು ಪಾನೀಯ ಸಾಗಾಟ ಮಾಡುತ್ತಿದ್ದ ಕಂಟೈನರ್ ಲಾರಿ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿಗೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿ ನಿರ್ಮಾಣ ಹಂತದ ಚರಂಡಿಗೆ ಬಿದ್ದಿದೆ. ಕಂಟೈನರ್ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿ ಬದಿಯ ತಡೆಬೇಲಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.