ಕಾಣಿಯೂರು: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Shri Subrahmanya Temple) ಬರುವ ಭಕ್ತರಿಗೆ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನದ ಉದ್ದೇಶಕ್ಕೆ ಶವರ್ ಅಳವಡಿಸಲಾಗಿದೆ.
ಮಳೆಗಾಲದ ಹಿನ್ನೆಲೆಯಲ್ಲಿ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚು ಇದ್ದು ನದಿ ನೀರಿಗೆ ಇಳಿದು ಸ್ನಾನ ಮಾಡದಂತೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರು. ಈ ಸಂದರ್ಭದಲ್ಲಿ ಭಕ್ತರಿಗೆ ತೀರ್ಥ ಸ್ನಾನಕ್ಕೆ ಸ್ನಾನ ಘಟ್ಟದಲ್ಲಿ ಡ್ರಮ್ ಗಳಲ್ಲಿ ನೀರು ತುಂಬಿಸಿಟ್ಟು ವ್ಯವಸ್ಥೆ ಮಾಡಲಾಗಿತ್ತು. ಭಕ್ತರ ಸ್ನಾನಕ್ಕೆ ಶವರ್ ಅಳವಡಿಸುವ ಬಗ್ಗೆ ದೇವಸ್ಥಾನದ ಅಧಿಕಾರಿಗಳು ಇತ್ತೀಚಿಗೆ ಸ್ಥಳ ಪರಿಶೀಲನೆ ನಡೆಸಿ ಯೋಜನೆ ರೂಪಿಸಿದ್ದರು. ಅದರಂತೆ ಇದೀಗ ದೇಗುಲದ ವತಿಯಿಂದ ಶವರ್ ಅಳವಡಿಸಲಾಗಿದೆ. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ.