ಪುತ್ತೂರು: ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದ ಸಿ. ಲೋಕೇಶ್ ಅವರು ಇದೀಗ ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ವರ್ಗಾವಣೆಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2008 ರಿಂದ ಡಯಟ್ ಉಪನ್ಯಾಸಕನಾಗಿ, 5 ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಧಿಕಾರಿಯಾಗಿ, ಸಮಗ್ರ ಶಿಕ್ಷಣ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸೇರಿದಂತೆ, ಹೆಚ್ಚುವರಿ ಪ್ರಭಾರದಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಭಾರ ಅಡಳಿತಾಧಿಕಾರಿಯಾಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅವರು ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿದ್ದಾರೆ.