ಪುತ್ತೂರು: ಸೆ.15ರಂದು ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ 164ನೇ ಜನ್ಮದಿನ ಅಂಗವಾಗಿ ಆಚರಿಸಲಾಗುವ ಇಂಜಿನಿಯರ್ಸ್ ಡೇ ಕಾರ್ಯಕ್ರಮದ ಅಂಗವಾಗಿ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಕೇಂದ್ರದ ವತಿಯಿಂದ ಸೆ.16ರಂದು ಸಂಜೆ ಗಂಟೆ 4ಕ್ಕೆ ಪುತ್ತೂರು ನಗರದಲ್ಲಿ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯಎರ್ಸ್ ನ ಪುತ್ತೂರು ಕೇಂದ್ರದ ಸದಸ್ಯ ಶಿವರಾಮ್ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
ಇಂಜಿನಿಯರ್ಸ್ ಡೇ ಅಂಗವಾಗಿ ನಡೆಯುವ ವಾಕಥಾನ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಮಹಾತ್ಮಗಾಂಧಿ ಕಟ್ಟೆಯ ಬಳಿಯಿಂದ ಬೊಳುವಾರು ತನಕ ತೆರೆಳಿ ಸಮಾವೇಶಗೊಳ್ಳಲಿದೆ. ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಾರಾಮ್ ಅವರು ವಾಕಥಾನ್‌ಗೆ ಚಾಲನೆ ನೀಡಲಿದ್ದಾರೆ. ಸುಮಾರು ನೂರಕ್ಕೂ ಮಿಕ್ಕಿ ಇಂಜಿನಿಯರ‍್ಸ್ ವಾಕಥಾನ್ ನಲ್ಲಿ ಭಾಗವಹಿಸಲಿದ್ದು, ಇಂಜಿನಿಯರ್‌ಗಳ ವೃತ್ತಿಪರ ಬದ್ದತೆಯ ಕೆಲಸದ ಕುರಿತು ಜನರಿಗೆ ಸಾಮಾಜಿಕ ಅರಿವು ಮೂಡಿಸುವ ಉದ್ದೇಶದಿಂದ ಈ ವಾಕಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂಜಿನಿಯರ‍್ಸ್ ಇಲ್ಲದೆ ಜನರಿಗೆ ತಪ್ಪುತಿಳುವಳಿಕೆ ನೀಡಿ ಮಾಡುತ್ತಿರುವ ಕನ್‌ಸ್ಟ್ರಕ್ಷನ್‌ಗಳು ಮತ್ತೆ ವೈಫಲ್ಯ ಆಗುತ್ತಿರುವುದು ನಡೆಯುತ್ತಿದೆ. ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದ ಅವರು ಸಂಜೆ ಗಂಟೆ 6ಕ್ಕೆ ದರ್ಬೆ ಅಶ್ವಿನಿ ಹಾಲ್‌ನಲ್ಲಿ ಇಂಜಿನಿಯರ್ಸ್ ಡೇ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಹಾಯಕ ಕಮೀಷನರ್ ಜುಬಿನ್ ಮೊಹಪಾತ್ರ, ಅತಿಥಿಗಳಾಗಿ ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ಪುಡಾ ಸದಸ್ಯ ಕಾರ್ಯದರ್ಶಿ ಅಭಿಲಾಷ್, ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ‍್ಸ್ ರಾಷ್ಟ್ರೀಯ ಪೂರ್ವಾ ಕಾರ್ಯದರ್ಶಿ ವಿಜಯ ವಿಷ್ಣು ಮಯ್ಯ, ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ‍್ಸ್‌ನ ಪುತ್ತೂರು ಕೇಂದ್ರದ ಅಧ್ಯಕ್ಷ ಪ್ರಮೋದ್ ಕುಮಾರ್ ಕೆ.ಕೆ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಇಂಜಿನಿಯರ್‌ಗಳಾಗಿರುವ ವೇಣುಗೋಪಾಲ್ ಶೆಣೈ ಮತ್ತು ನಾರಾಯಣ ಮಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ನ ಕೋಶಾಧಿಕಾರಿ ಚೇತನ್, ಸದಸ್ಯರಾದ ಪ್ರಸನ್ನ ದರ್ಬೆ, ವ್ಯವಸ್ಥಾಪಕ ಸಮಿತಿ ಸದಸ್ಯ ಚಂದ್ರಶೇಖರ್ ಆಳ್ವ, ಸದಸ್ಯ ಆದರ್ಶ್ ಉಪಸ್ಥಿತರಿದ್ದರು.