ಮಾಣಿ ಬಾಲವಿಕಾಸದ ವಿದ್ಯಾರ್ಥಿ ಚಿಂತನ್ ಸ್ಕೇಟಿಂಗ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ವಿಟ್ಲ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆ. 12ರಂದು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸ್ಕೇಟಿಂಗ್ ಸ್ಪರ್ಧೆ 500 ಮೀಟರ್ ವಿಭಾಗದಲ್ಲಿಯೂ ದ್ವಿತೀಯ ಸ್ಥಾನ ಪಡೆದಿರುವ ಚಿಂತನ್ ಬಾಳ್ತಿಲ ನಿವಾಸಿಗಳಾದ ಲೋಕೇಶ್ ಮತ್ತು ರೇಖಾ ದಂಪತಿಗಳ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here