ಉಪ್ಪಿನಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇವರ ವತಿಯಿಂದ ಸೆಪ್ಟೆಂಬರ್ 11 ರಂದು ಉಪ್ಪಿನಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ಥ್ರೋಬಾಲ್ ಪಂದ್ಯಾಟವು ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕ ಸುಬ್ರಮಣ್ಯ ಭಟ್ ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸದಿಂದ ಕ್ರೀಡಾ ಸ್ಪೂರ್ತಿಯೊಂದಿಗೆ ಆಟವಾಡಿ ಜಯಶಾಲಿಗಳಾಗುವಂತೆ ಪ್ರೋತ್ಸಾಹಿಸಿದರು. ಅತಿಥಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳವುದರೊಂದಿಗೆ ಸೋಲು ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುವಂತೆ ತಿಳಿಸಿದರು. ಎಸ್.ಎಸ್.ಎಲ್. ಸಿ ನೋಡಲ್ ಅಧಿಕಾರಿ ಹರಿಪ್ರಸಾದ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉದ್ಘಾಟಕರಾಗಿ ಆಗಮಿಸಿರುವ ಸಂಸ್ಥೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ ಸಂಸ್ಥೆಯ ಪೂರ್ವ ವಿದ್ಯಾರ್ಥಿ ಡಾ | ಚಂದನ್ ಆರ್.ಕೆ ಪಂದ್ಯಾಟವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ನಂತರ ನಡೆದ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಒಟ್ಟು 10 ತಂಡಗಳು ಹಾಗೂ 10 ಬಾಲಕಿಯರ ತಂಡಗಳು ಭಾಗಹಿಸಿದ್ದವು. ಅಂತಿಮವಾಗಿ ಬಾಲಕರ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಪ್ರಥಮ, ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿನ ವಿದ್ಯಾರ್ಥಿಗಳ ತಂಡ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ, ಪಾಂಗ್ಲಾಯಿ ಇಲ್ಲಿನ ವಿದ್ಯಾರ್ಥಿನಿಯರ ತಂಡ ಪ್ರಥಮ, ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇಲ್ಲಿನ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಪ್ರಥಮ ಸ್ಥಾನವನ್ನು ಪಡೆದ ತಂಡಗಳು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಸಮಾರೋಪ ಸಮಾರಂಭದಲ್ಲಿ ಪ್ರಭಾರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಚಕ್ರಪಾಣಿ ಎ. ವಿ, ಸಿ. ಆರ್. ಪಿ ಆಶ್ರಫ್ ಹಾಗೂ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್. ಕೆ ಪ್ರಕಾಶ್ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮೋನಪ್ಪ ಎಂ, ದೈಹಿಕ ಶಿಕ್ಷಣ ಶಿಕ್ಷಕರು ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಾಮಚನ್ ಎಂ, ಶ್ರೀ ರಾಮ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಜಯಂತ್ ಪುರೋಳಿ, ಆಡಳಿತ ಮಂಡಳಿಯ ಅಧ್ಯಕ್ಷ ಕರುಣಾಕರ ಸುವರ್ಣ, ಸದಸ್ಯರಾದ ರಾಜೇಶ್ ಪೈ, ಏಕವಿದ್ಯಾಧರ ಜೈನ್ ಹಾಗೂ ಶ್ರೀಮತಿ ವಂದನಾ, ಶಿಕ್ಷಕ – ಶಿಕ್ಷಕೇತರ ವೃಂದವರು ಹಾಗೂ ಪಾಲಕರು ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಸಹ ಶಿಕ್ಷಕಿಯಾದ ಸುಪ್ರೀತಾ, ಸುನೀತಾ, ನೇಹಾ, ಭವ್ಯ ಪಿ.ಎಸ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.