ಬೆಟ್ಟಂಪಾಡಿ ಪಿ.ಯು ಕಾಲೇಜಿನಲ್ಲಿ ಪುತ್ತೂರು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

0

ನಿಡ್ಪಳ್ಳಿ:  ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ.ಜಿಲ್ಲೆ ಹಾಗೂ ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಬೆಟ್ಟಂಪಾಡಿ ಬಿಲ್ವಗಿರಿ ಕ್ರೀಡಾಂಗಣದಲ್ಲಿ ಸೆ.10 ರಂದು ನಡೆಯಿತು.ಪ್ರಗತಿಪರ ಕೃಷಿಕ ಸುಬ್ರಹ್ಮಣ್ಯ ರಾವ್ ಶರವು ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟರಮಣ ಬೋರ್ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಅನೇಕ ಅವಕಾಶಗಳು ಇದೆ.ಹಾಗಾಗಿ ಸಿಕ್ಕಿದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿ ಕೊಂಡಾಗ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. 

 ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಭಾಸ್ಕರ ಕರ್ಕೆರ ಮಾತನಾಡಿ ತಾಲೂಕು ಮಟ್ಟದ ಪಂದ್ಯಾಟ ಅಲ್ಲದೆ ಜಿಲ್ಲಾ, ರಾಜ್ಯ ಮಟ್ಟದ ಪಂದ್ಯಾಟವನ್ನು ಆಯೋಜಿಸಲು ನಾವು ಬದ್ಧವಾಗಿದ್ದೇವೆ. ಕ್ರೀಡಾಕೂಟದ ಮೂಲಕ ಮಾನಸಿಕ ದೈಹಿಕ ಆರೋಗ್ಯ ವೃದ್ಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

 ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಹರೀಶ್ ಕುಮಾರ್ ನಿಡ್ಪಳ್ಳಿ,  ಬಾಬು ರೈ ಕೋಟೆ, ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪೊಡಿಯ, ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ರೈ ಪಾಣಾಜೆ,  ಸುಧಾಕರ್ ರೈ ಗಿಳಿಯಾಲು, ಸೀತಾರಾಮ ಗೌಡ ಮಿತ್ತಡ್ಕ, ಪ್ರವೀಣ ರೈ ಪಾಪೆ ಮಜಲು, ರವಿಕಲಾ,ಚಿತ್ರಲತಾ, ಪುನೀತ್, ಚಂದ್ರಕಲಾ, ಆಸಿಫ್, ಕೃಷ್ಣಪ್ರಸಾದ್, ಫಾರೂಕ್ ಮತ್ತಿತರರು ಉಪಸ್ಥಿತರಿದ್ದರು.

  ಫಲಿತಾಂಶ : ಬಾಲಕರ ವಿಭಾಗದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ (ಪ್ರಥಮ )
ವಿವೇಕಾನಂದ ಪದವಿಪೂರ್ವ ಕಾಲೇಜ್ ಪುತ್ತೂರು ( ದ್ವಿತೀಯ )

ಬಾಲಕಿಯರ ವಿಭಾಗ :ಅಂಬಿಕಾ ಪದವಿ ಪೂರ್ವ ಕಾಲೇಜು ಪುತ್ತೂರು (ಪ್ರಥಮ )
ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು (ದ್ವಿತೀಯ)

 ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಫಾರೂಕ್ ಸಿ ಸ್ವಾಗತಿಸಿದರು. ಕ್ರೀಡಾ ಸಂಯೋಜಕ ಉಪನ್ಯಾಸಕ ಕಮಲಾಕ್ಷ ಆನಡ್ಕ ವಂದಿಸಿದರು.ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here