ಪುತ್ತೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆಯ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಹಾಗೂ ಪೆಟ್ರೋಲ್ ಬಾಂಬ್ ದಾಳಿ ನಡೆದಿರುವುದನ್ನು ಖಂಡಿಸಿ ಪುತ್ತೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಸೆ.12ರಂದು ಸಾಯಂಕಾಲ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಧಾರ್ಮಿಕ ಪರಿಷತ್ ನ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ, ವಿಶ್ವಹಿಂದು ಪರಿಷದ್ ಜಿಲ್ಲಾಧ್ಯಕ್ಷ ಡಾ|ಕೃಷ್ಣಪ್ರಸನ್ನ, ಪುತ್ತೂರು ಪ್ರಖಂಡದ ಅಧ್ಯಕ್ಷ ದಾಮೋದರ್ ಪಾಟಾಳಿ ಪ್ರತಿಭಟನಾಕಾರರನ್ನುದ್ಧೇಶಿಸಿ ಮಾತನಾಡಿ, ‘ಈ ಘಟನೆಯ ಹಿಂದೆ ಇರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು ಮತ್ತು ಇದಕ್ಕೆ ತಪ್ಪಿದಲ್ಲಿ ರಾಜ್ಯದ ಗಲ್ಲಿಗಲ್ಲಿಗಳಲ್ಲೂ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಉಪಾಧ್ಯಕ್ಷ ವಿಶ್ವನಾಥ ಗೌಡ ಬನ್ನೂರು ಸಹಿತ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Home ಇತ್ತೀಚಿನ ಸುದ್ದಿಗಳು ಮಂಡ್ಯ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಘಟನೆ ಖಂಡಿಸಿ ಪುತ್ತೂರು ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ...