ಲಿಟ್ಲ್ ಫ್ಲವರ್ ಹಿ. ಪ್ರಾ.ಶಾಲಾ ಬಾಲಕಿಯರ ಕಬಡ್ಡಿ ತಂಡ ಸತತ 6ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ 

0

puttur: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ಕೊಡಿಪ್ಪಾಡಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಸೆ.12ರಂದು ಕುಡಿಪಾಡಿ ಶಾಲೆಯಲ್ಲಿ ನಡೆದ 14 ರ ವಯೋಮಾನದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಬಾಲಕಿಯರ ತಂಡ ಸತತ 6ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ತರಬೇತಿ ನೀಡಿದ್ದಾರೆ.

ಕಳೆದ ಸಾಲಿನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿತ್ತು:
2023-24ನೇ‌ ಶೈಕ್ಷಣಿಕ ಸಾಲಿನ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡವು  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿತ್ತು.

LEAVE A REPLY

Please enter your comment!
Please enter your name here