ಕೆಯ್ಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-ಪ್ರತಿಭಾ ಕಲರವ

0

ಮಕ್ಕಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಮಾರ್ಗದರ್ಶನ ಕೊಟ್ಟಗ ಮಾತ್ರ, ಮುಂದೆ ಬರಲು ಸಾಧ್ಯ- ಶರತ್ ಕುಮಾರ್ ಮಾಡಾವು

ಕೆಯ್ಯೂರು: ಕೆಪಿಎಸ್ ಪ್ರಾಥಮಿಕ ವಿಭಾಗ ಕೆಯ್ಯೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು,ಸಮೂಹ ಸಂಪನ್ಮೂಲ ಕೇಂದ್ರ ಕೆಯ್ಯೂರು, ಕೆಪಿಎಸ್ ಕೆಯ್ಯೂರು ಇವರ ಆಶ್ರಯದಲ್ಲಿ ಕ್ಲಸ್ಟರ್ ಮಟ್ಟದ ಚಿಣ್ಣರ ಕಲರವ 2024-25ನೇ ಸಾಲಿನ ಪ್ರತಿಭಾ ಕಾರಂಜಿ ಸೆ.13ರಂದು ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶರತ್ ಕುಮಾರ್ ಮಾಡಾವು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ, ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಪ್ರತಿಭೆಗಳನ್ನು ಗುರುತಿಸುವಿಕೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಮುಂದೆ ಬರಲು ಸಾಧ್ಯ ಎಂದು ಶುಭ ಹಾರೈಸಿದರು.

ಕೆಪಿಎಸ್ ಕೆಯ್ಯೂರು ಕಾರ್ಯಧ್ಯಕ್ಷ ಎ.ಕೆ ಜಯರಾಮ ರೈ ಕೆಯ್ಯೂರು. ಅಧ್ಯಕ್ಷತೆ ವಹಿಸಿ, ಮಕ್ಕಳ ಪ್ರತಿಭೆಗಳಲ್ಲಿ ಸೋಲು-ಗೆಲುವು ಶಾಶ್ವತ, ವಿದ್ಯಾರ್ಥಿಗಳು ಒಳ್ಳೆಯ ರೀತಿಯಲ್ಲಿ ಸಹಕರಿಸಿ ಪ್ರತಿಭಾವಂತರಾಗಿ ಮುಂದೆ ಬನ್ನಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಅಮೃತ ಕಲಾ ಶಿಕ್ಷಣ ಸಂಯೋಜಕಿ ಅಮೃತ ಕಲಾ, ಕೆಪಿಎಸ್ ಕೆಯ್ಯೂರು ಪ್ರಾಂಶುಪಾಲ  ಇಸ್ಮಾಯಿಲ್ ಕೆ, ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ ಎಸ್, ಕೆಪಿಎಸ್‌ ಕೆಯ್ಯೂರು ಪ್ರಾಥಮಿಕ ವಿಭಾಗ ಮುಖ್ಯಗುರು ಬಾಬು. ಎಂ, ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯ ಜಯಂತ ಪೂಜಾರಿ ಕೆಂಗುಡೇಲು, ವೇದಿಕೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ನವೀನ್ ಸ್ಟಿಪ್ಪನ್ ವೇಗಸ್ ಪ್ರತಿಭಾ ಕಾರಂಜಿಯ ಬಗ್ಗೆ ಮಕ್ಕಳಿಗೆ ವಿಶೇಷವಾಗಿ ಬೋಧನೆ ನೀಡುವ ಮೂಲಕ ಪ್ರಸ್ತಾವಿಕವಾಗಿ ಮಾತಾಡಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶಶಿಕಲಾ ಸ್ವಾಗತಿಸಿ, ಕೆಪಿಎಸ್ ಪ್ರಾಥಮಿಕ ವಿಭಾಗ ಕೆಯ್ಯೂರು ಶಿಕ್ಷಕಿ ಶೈಲಜಾ ವಂದಿಸಿ, ಶಿಕ್ಷಕರಾದ ರವಿ ಟಿ ಎಂ, ಆದಿತ್ಯ ಹೆಬ್ಬಾರ್ ಎ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಂಭ 
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೆಪಿಎಸ್ ಕೆಯ್ಯೂರು ಪ್ರಾಂಶುಪಾಲ ಇಸ್ಮಾಯಿಲ್ ಕೆ ವಹಿಸಿದರು. ಈ ಸಂದರ್ಭದಲ್ಲಿ ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯೆ ಮೀನಾಕ್ಷಿ ವಿ ರೈ, ಕೆಪಿಎಸ್ ಪ್ರಾಥಮಿಕ ವಿಭಾಗ ಕೆಯ್ಯೂರು ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಪಾಲ್ತಾಡು, ಎಸ್ ಡಿಎಂಸಿ ಸದಸ್ಯರಾದ ಧರಣಿ.ಸಿ, ಆಯುಬ್ ವಿನುತ, ಕೆಪಿಎಸ್ ಕೆಯ್ಯೂರು ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ ಎಸ್, ಕೆಪಿಎಸ್ ಕೆಯ್ಯೂರು ಪ್ರಾಥಮಿಕ ವಿಭಾಗ ಮುಖ್ಯಗುರು ಬಾಬು ಎಂ ಉಪಸ್ಥಿತರಿದ್ದರು.

ಸಮಗ್ರ ಪ್ರಶಸ್ತಿ
ಹಿರಿಯರ ವಿಭಾಗ ಪ್ರಥಮ: ಕೆಪಿಎಸ್ ಕೆಯ್ಯೂರು,  ದ್ವಿತೀಯ: ಸ. ಉ. ಹಿ. ಪ್ರಾಥಮಿಕ ಶಾಲೆ ತಿಂಗಳಾಡಿ

 ಕಿರಿಯರ ವಿಭಾಗ  ಪ್ರಥಮ: ಸ.ಕಿ. ಪ್ರಾಥಮಿಕ ಶಾಲೆ ಚೆನ್ನಾವರ, ದ್ವಿತೀಯ: ಕೆಪಿಎಸ್ ಪ್ರಾಥಮಿಕ ವಿಭಾಗ ಕೆಯ್ಯೂರು ಪಡೆದುಕೊಂಡಿತು.

LEAVE A REPLY

Please enter your comment!
Please enter your name here