ಪುತ್ತೂರು: ದ.ಕ.ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರನ್ನು ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ಒಡಿಶಾ ರಾಜ್ಯಕ್ಕೆ ನಿಯೋಜಿಸಲಾಗಿದೆ.
ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.