
ಪುತ್ತೂರು: ವಿಶ್ವ ಸಂಸ್ಥೆ ಮತ್ತು ಇತರೆ ಅಂತರಾಷ್ಟ್ರೀಯ ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆ, ಅಭಿವೃದ್ಧಿ, ಶಾಂತಿ ಮತ್ತಉ ಸ್ಥಿರತೆಯ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು, ಅದರ ಮೌಲ್ಯಗಳನ್ನು , ತತ್ವಗಳನ್ನು ಎತ್ತಿ ಹಿಡಿಯಲು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ನಡೆದ ಮಾನವ ಸರಪಳಿಯಲ್ಲಿ ಕುಂಬ್ರದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಸುಮಾರು ಅರ್ಧ ಕಿಲೋ ಮೀಟರ್ ತನಕ ನಾಗರಿಕರು, ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಗ್ರಾಮ ಪಂಚಾಯತ್ ಸೇರಿದಂತೆ ಅಧ್ಯಕ್ಷರು, ಸಸದಸ್ಯರುಗಳು, ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಸರಕಾರಿ ಉದ್ಯೋಗಿಗಳು ಮಾನವ ಸರಪಳಿಯಲ್ಲಿ ಕೈ ಜೋಡಿಸಿದರು.
