ತೆರಿಗೆಯ ಬಗೆಗೆ ಪ್ರತಿಯೊಬ್ಬರಿಗೂ ಮಾಹಿತಿ ಇರಬೇಕು: ಸುದರ್ಶನ್ ರಾವ್
ಪುತ್ತೂರು: ದೇಶದ ಅಭಿವೃದ್ಧಿ ಕಾರ್ಯಗಳಿಗೆ ಆದಾಯ ಎಲ್ಲಿಂದ ಬರುತ್ತದೆ? ತೆರಿಗೆ ಪಾವತಿ ಏಕೆ ಮಾಡಬೇಕು? ತೆರಿಗೆಯ ವಿಧಗಳಾವುವು? ಇಂತಹ ವಿಚಾರಗಳನ್ನು ತೆರಿಗೆ ಪಾವತಿ ಮಾಡುವವರು ಮಾತ್ರವಲ್ಲ ವಿದ್ಯಾರ್ಥಿಗಳಾದಿಯಾಗಿ ಎಲ್ಲರೂ ತಿಳಿದುಕೊಳ್ಳುವ ಅನಿವಾರ್ಯತೆ ಇದೆ ಎಂದು ಆದಾಯ ತೆರಿಗೆ ಅಧಿಕಾರಿ ಸುದರ್ಶನ್ ರಾವ್ ಕೆ. ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುವಾರ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ, ಚಾರ್ಟರ್ಡ್ ಅಕೌಂಟೆಂಟ್ ಅರವಿಂದ ಕೃಷ್ಣ ಮಾತನಾಡಿ ಬೇರೆ ಬೇರೆ ಇಲಾಖೆಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ದೇಶದ ಅಭಿವೃದ್ಧಿಗಾಗಿ ಕೊಡುವಂತಹದ್ದು ಆದಾಯ ತೆರಿಗೆ. ಇದನ್ನು ಪಾವತಿಸದಿದ್ದರೆ ಇದ್ದರೆ ದೇಶದ ಅರ್ಥವ್ಯವಸ್ಥೆ ಕೆಡುತ್ತದೆ. ಆದುದರಿಂದ ತೆರಿಗೆ ಕಟ್ಟುವ ಜವಾಬ್ದಾರಿಯನ್ನು ಅರಿತುಕೊಳ್ಳುವುದು ಅವಶ್ಯ ಎಂದು ಹೇಳಿದರು.
ಆದಾಯ ತೆರಿಗೆ ಕಚೇರಿಯ ಉದ್ಯೋಗಿ ಹೇಮಂತ್ ಕುಮಾರ್ ಆದಾಯ ತೆರಿಗೆ ಇಲಾಖೆಯ ನೇಮಕಾತಿ ಬಗ್ಗೆ ಮಾಹಿತಿ ಇತ್ತರು. ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಮನೋಜ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರು ಸ್ವಾಗತಿಸಿದರು. ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ವಿದ್ಯಾರ್ಥಿಗಳು ಹಾಗೂ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳು, ಉಪನ್ಯಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.