ಬಂಟ್ವಾಳ: ಪುರಸಭಾ ವ್ಯಾಪ್ತಿಯ ಮದ್ಯದಂಗಡಿಗಳು ಬಂದ್-‌ ಜಿಲ್ಲಾಧಿಕಾರಿ ಆದೇಶ

0

48ಗಂಟೆಗಳ ಕಾಲ ಬಂದ್

ಪುತ್ತೂರು: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಮತ್ತು ಮೆರವಣಿಗೆಗಳು ನಡೆಯಲಿರುವ ಬಗ್ಗೆ ಸೆ.14ರಂದು ಬಂಟ್ವಾಳ ಪುರಸಭೆಯ ಸದಸ್ಯ ಶರೀಫ್ ಎಂಬವರು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತೀಯ ಕಾರ್ಯದರ್ಶಿ ಶರಣ್ ಪಂಪೈಲ್ ರವರನ್ನು ಉದ್ದೇಶಿಸಿ ವ್ಯತಿರಿಕ್ತ ಹಾಗೂ ಅನುಚಿತ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಯವರು ಸವಾಲಾಗಿ ಸ್ವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿ.ಸಿ.ರೋಡ್ ಚಲೋ ಎಂಬ ಸಂದೇಶದೊಂದಿಗೆ ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ಸೆ.16ರಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ ಸೇರಿಕೊಂಡು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಗಳಿದ್ದು, ಬಂಟ್ವಾಳ ನಗರ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯಿದೆ, 1965 ಸೆಕ್ಷನ್ 21(1) ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯವರೆಗೆ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here