ಬೆಂಗಳೂರು ವಿವಿ ಘಟಿಕೋತ್ಸವ – ಉಪ್ಪಿನಂಗಡಿಯ ಶಾಹಿಲ್‌ಗೆ ಚಿನ್ನದ ಪದಕ

0

ಉಪ್ಪಿನಂಗಡಿ: ಬೆಂಗಳೂರು ವಿಶ್ವವಿದ್ಯಾಲಯದ 59ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಉಪ್ಪಿನಂಗಡಿಯ ಶಾನಿಲ್ ಯಾಕೂಬ್ ಅವರು ರಾಜಕೀಯ ವಿಜ್ಞಾನದಲ್ಲಿ ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆದಿದ್ದಾರೆ. ಅವರು ವಿಶ್ವವಿದ್ಯಾಲಯದ 2023ರ ಬಿ.ಎ. ಪದವಿಯಲ್ಲಿ 6ನೇ ರ‍್ಯಾಂಕ್‌ ಗಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಪ್ರೊ- ಚಾನ್ಸೆಲರ್ ಡಾ. ಎಂ.ಸಿ. ಸುಧಾಕರ್ ಅವರು ಪದಕ ಪ್ರದಾನ ಮಾಡಿದರು. ಈ ಸಂದರ್ಭ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ. ದೀಪಕ್ ಕುಮಾರ್ ಶ್ರೀವಾತ್ಸವ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕಾರ ಎಸ್.ಎಂ. ಉಪಸ್ಥಿತರಿದ್ದರು.

ಶಾನಿಲ್ ಅವರು ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ನಲ್ಲಿ ಬಿ.ಎ. ಪದವಿಯನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ. ಇವರು ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್, ಇಂದ್ರಪ್ರಸ್ಥ ವಿದ್ಯಾಲಯ, ಮತ್ತು ಸಂತ ಆಲೋಸಿಯಸ್ ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಉಪ್ಪಿನಂಗಡಿಯ ಸಾಹಿತಿ ಜಲೀಲ್ ಮುಕ್ರಿ ಮತ್ತು ಉಪ್ಪಿನಂಗಡಿ ಇಂಡಿಯನ್ ಸ್ಕೂಲ್‌ನ ಪ್ರಾಂಶುಪಾಲೆ ಸಂಶಾದ್ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here