ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.10ರಂದು ಆಚರಿಸಲಾಯಿತು. ಡಾ| ಸರ್ವಪಳ್ಳಿ ರಾಧಾಕೃಷ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಸಮಾರಂಭಕ್ಕೆ ಸಾಂಕೇತಿಕ ಚಾಲನೆ ನೀಡಲಾಯಿತು.
ಮಾಯಿದೆ ದೇವುಸ್ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ತ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಗಿನಿ ಲೋರಾ ಪಾಯಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ಅತೀ ವಂದನೀಯ ಧರ್ಮಗುರು ಲೋರೆನ್ಸ್ ಮಸ್ಕರೇನ್ಹಸ್ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ವಿವೇಕ್ ಆಳ್ವ ಶಿಕ್ಷಕರಿಗೆ ಶುಭ ಹಾರೈಸಿದರು.
ಶಾಲಾ ವಿದ್ಯಾರ್ಥಿನಿ ಶಝಾರ ಶಿಕ್ಷಕ ದಿನದ ಮಹತ್ವ ತಿಳಿಸಿ, ಶಾಲಾ ವಿದ್ಯಾರ್ಥಿ ಅಹನ್ ಆಳ್ವ ಭಾಷಣದ ಮೂಲಕ ಶಿಕ್ಷಕರಿಗೆ ಶುಭ ಕೋರಿದರು. ನಂತರ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ವಿವೇಕ್ ಆಳ್ವ ರಚಿಸಿದ ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರ ಬಾಲ್ಯದ ಭಾವಚಿತ್ರಗಳನ್ನೊಳಗೊಂಡ ಪಿ.ಪಿ.ಟಿ ಪ್ರೆಸೆಂಟೇಶನನ್ನು ಅನಾವರಣಗೊಳಿಸಿದರು.
ರಕ್ಷಕ – ಶಿಕ್ಷಕ ಸಂಘದ ವತಿಯಿಂದ ಶಿಕ್ಷಕರಿಗೆ ಆಯೋಜಿಸಲಾದ ಆಟೋಟ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವನ್ನು ರಕ್ಷಕ-ಶಿಕ್ಷಕ ಸಂಘದ ಸದಸ್ಯೆ ಎಲ್ಮೀರಾ ಮೊಂತೇರೊ ಮತ್ತು ಅಜಿತ್ ಗೌಡ ನಡೆಸಿಕೊಟ್ಟರು. ಶಾಲಾ ವಿದ್ಯಾರ್ಥಿವೃಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಸಮಾರಂಭದಲ್ಲಿ ಮಾಯಿದೆ ದೇವುಸ್ ಚರ್ಚಿನ ಸಹಾಯಕ ಧರ್ಮ ಗುರು ಲೋಹಿತ್ ಮಸ್ಕರೇನ್ಹಸ್ , ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಂದನೀಯ ಧರ್ಮಗುರು ಮ್ಯಾಕ್ಸಿಮ್ ಡಿಸೋಜ, ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿವೃಂದದವರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿನಿ ವೈಷ್ಣವಿ ವಿ. ಕೆ. ನಿರೂಪಿಸಿದರು.ಶಾಲಾ ವಿದ್ಯಾರ್ಥಿ ನಾಯಕ ಹಾರುಷ್ ರೈ ಸ್ವಾಗತಿಸಿ, ಶಾಲಾ ವಿದ್ಯಾರ್ಥಿ ಆಯುಷ್ ರೈ ವಂದಿಸಿದರು.
ಶಾಲಾ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಆಯೋಜಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯ ಅವಿನಾಶ್ ಕೆ. ರವಿಕುಮಾರ್ ಹೋಟೇಲ್ ನಿರ್ವಹಣಾ ಪರಿಣಿತ ಲಿಖಿನ್ ಪೂಜಾರಿ ಸಹಕರಿಸಿದರು.