ಬಡಗನ್ನೂರು: ಸುಳ್ಯಪದವು ಹಾಲು ಉತ್ಪಾದಕರ ಸಹಕಾರ ಸಂಘ 2023-2024ನೇ ಸಾಲಿನ ಸರ್ವಸದಸ್ಯರ ಸಾಮಾನ್ಯ ಸಭೆಯು ಸೆ.19 ರಂದು ಪೂರ್ವಾಹ್ನ ಘಂ.10-30ಕ್ಕೆ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಕೆ. ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.
ಆ ಪ್ರಯುಕ್ತ ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಕಾರ್ಯದರ್ಶಿ ವಿನಯಕುಮಾರ ಕೆ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.