ಮೈಸೂರಿನಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ – ಫಿಲೋಮಿನಾದ ವರ್ಷಾ, ಯಶ್ವಿನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಆಯೋಜಿಸಿದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟವು ಸೆ.14 ರಿಂದ 17ರ ವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಜರಗಿದ್ದು ಈ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಈರ್ವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.


ಫಿಲೋಮಿನಾ ಕಾಲೇಜಿನ ಪ್ರಥಮ ಬಿಕಾಂನ ಯಶ್ವಿನ್ ರವರು ಅಂಡರ್ 20 ವಯೋಮಿತಿಯ ಎತ್ತರ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ಬಿಸಿಎ ವಿಭಾಗದ ವರ್ಷಾರವರು ಹ್ಯಾಮರ್ ತ್ರೋ ನಲ್ಲಿ ಬೆಳ್ಳಿ ಪದಕಗಳನ್ನು ಪಡೆದು ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಪ್ರಥಮ ಬಿಕಾಂನ ಪ್ರಥ್ವಿರವರು ಹ್ಯಾಮರ್ ತ್ರೋನಲ್ಲಿ, ದ್ವಿತೀಯ ಬಿಎಸ್ಸಿಯ ಚೈತ್ರಿಕಾ, ಪ್ರಥಮ ಬಿಬಿಎ ವಿಭಾಗದ ಕೀರ್ತನ್ ರವರು 400ಮೀ ಓಟದಲ್ಲಿ ಭಾಗವಹಿಸಿರುತ್ತಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಎಲ್ಯಾಸ್ ಪಿಂಟೊ ಹಾಗೂ ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here