ಸೆ.21: ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ಮಹಾಸಭೆ

0

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನೆಲ್ಯಾಡಿ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.21ರಂದು ಪೂರ್ವಾಹ್ನ 9.30ಕ್ಕೆ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಲಿದೆ.


ಮಹಾಸಭೆಯ ಬಳಿಕ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಲಹೆ ಸೂಚನೆ ನೀಡಿದ ಪೊಲೀಸ್ ಅಧಿಕಾರಿಗಳಿಗೆ, ಮಹಿಳಾ ಸೈನಿಕರಿಗೆ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ, 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಉಷಾ ಅಂಚನ್, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಚೈತನ್ಯ ಹೆಚ್.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here