ಕ್ಷೇತ್ರಮಟ್ಟದ ವಾಲಿಬಾಲ್‌ ಪಂದ್ಯಾಟ- ವಿವೇಕಾನಂದ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ವಾಲಿಬಾಲ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಬಿಂದು ಎಚ್‌.ಆರ್‌, ಪ್ರಜ್ಞಾ ಎ.ಎಸ್‌ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ನಿಶಾ ಎ.ಎಸ್‌ ಇವರು ಭಾಗವಹಿಸಿದ್ದರು.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್‌, ಡಾ.ಜ್ಯೋತಿ ಮತ್ತು ಯತೀಶ್‌ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here