ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣ ಅಂಗವಾಗಿ ಕಲಶ ಸೇವೆ ಭಜನೆ

0

ಬಡಗನ್ನೂರುಃ  ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸೆ.16 ರಂದು ಸಂಕ್ರಮಣ ಅಂಗವಾಗಿ ಸ್ವಾಮಿ ಕೊರಗಜ್ಜ ಹಾಗೂ ಗುಳಿಗ ಸಾನಿಧ್ಯದಲ್ಲಿ ಕಲಶ ಸೇವೆ ನಡೆಯಿತು.

 ಸಂಜೆ .6 ರಿಂದ 8 ತನಕ  ಸ್ವಾಮಿ ಕೊರಗಜ್ಜ ಬಾಲ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಸ್ವಾಮಿ ಕೊರಗಜ್ಜ ಹಾಗೂ ಗುಳಿಗ ಸಾನಿಧ್ಯದಲ್ಲಿ ಕಲಶ ಸೇವೆ ಪ್ರಸಾದ ವಿತರಣೆ ನಡೆಯಿತು. ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ, ಕಾರ್ಯದರ್ಶಿ ಪ್ರಕಾಶ್ ಮರದಮೂಲೆ, ಉಪಾಧ್ಯಕ್ಷ ಸದಾನಂದ ಬೋಳಂಕೂಡ್ಲು, ಕೋಶಾಧಿಕಾರಿ ಭಾಸ್ಕರ ಹೆಗ್ಗಡೆ ಶಬರಿನಗರ, ಪ್ರಧಾನ ಪೂಜಾ ಕರ್ಮಿ ಮಾದವ ಸಾಲಿಯಾನ್ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here