ಜಿಲ್ಲಾ ಮಟ್ಟದ ತ್ರೋಬಾಲ್‌ ಪಂದ್ಯಾಟ – ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಕೆ.ಎಸ್.ಎಸ್‌ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್‌ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ ಪಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಯಶ್ವಿ.ಡಿ.ಶೆಟ್ಟಿ ಹಾಗೂ ಮೋನಿಷಾ ಭಾಗವಹಿಸಿದ್ದರು. ತಂಡವನ್ನು ಪ್ರತಿನಿಧಿಸಿದ ಯಶ್ವಿ ಡಿ. ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿನಿಯರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here