ಪುತ್ತೂರು: ಕರ್ನಾಟಕ ವಿಧಾನ ಪರಿಷತ್ತಿನ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ನಾಮಪತ್ರ ಸಲ್ಲಿಕೆಗೆ ಅ.3ರಂದು ಕೊನೆಯ ದಿನವಾಗಿದ್ದು,ನಾಮಪತ್ರ ಹಿಂಪಡೆಯಲು ಅ.7ರಂದು ಕೊನೆಯ ದಿನವಾಗಿದೆ.
ಇನ್ನು, ಅ.21 ರಂದು ಬೆಳಿಗ್ಗೆ 8 ಗಂಟೆಯಿಂದ 4 ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಅ.24ರಂದು ಫಲಿತಾಂಶ ಪ್ರಕಟವಾಗಲಿದೆ.