ಹಿರೆಬಂಡಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಬಿಎಂಸಿ ಪ್ರಶಸ್ತಿ

0

ಹಿರೆಬಂಡಾಡಿ: ಹಿರೆಬಂಡಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 2023-24ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಬಿಎಂಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಸೆ.18ರಂದು ಮಂಗಳೂರಿನಲ್ಲಿ ನಡೆದ ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 38ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ, ನಿರ್ದೇಶಕರಾದ ನಾರಾಯಣ ಪ್ರಕಾಶ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಹಿರೆಬಂಡಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಚಂದ್ರಾವತಿಸೀತಾರಾಮ ಗೌಡ ನೆಹರುತೋಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲಾಕ್ಷಿ ಹೆಚ್.ಅವರು ಈ ಪ್ರಶಸ್ತಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here