ಕಬಡ್ಡಿ: ರಾಮಕುಂಜ ಕ.ಮಾ.ಪ್ರೌಢಶಾಲಾ ವಿದ್ಯಾರ್ಥಿ ಸಮರ್ಥ್ ಜಿಲ್ಲಾಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಮರ್ಥ್ ಬಾಹುಬಲಿ ಯಲ್ಲಟ್ಟಿಯವರು ಕಬಡ್ಡಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಸಹಭಾಗಿತ್ವದಲ್ಲಿ ಕುಡಿಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ತಂಡವನ್ನು ಪ್ರತಿನಿಧಿಸಿದ್ದ ಸಮರ್ಥ್ ಬಾಹುಬಲಿ ಯಲ್ಲಟ್ಟಿಯವರನ್ನು ಜಿಲ್ಲಾಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.

ಈತನಿಗೆ ಮಾಧವ ಬಿ.ಕೆ., ಜಶ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್ ಹಾಗೂ ಶಿಕ್ಷಕರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here