ಪುತ್ತೂರು: ಬೊಳ್ವಾರು ಹಿರಣ್ಯ ಸಂಕೀರ್ಣದಲ್ಲಿರುವ ಪುತ್ತೂರು ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಜೆ ಸಂಘದ ಕಚೇರಿಯಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಪಿ.ಪಾಂಡುರಂಗ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸದಸ್ಯರು ವಿವಿಧ ಸಲಹೆ ಸೂಚನೆ ನೀಡುವಂತೆ ಸಂಘದ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಶೆಟ್ಟಿ ಎಂ ಅವರು ತಿಳಿಸಿದ್ದಾರೆ.