ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಉಪ್ಪಿನಂಗಡಿ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.22ರಂದು ನಡೆಯಲಿದೆ.
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ನೇತ್ರಾವತಿ ಸಮುದಾಯ ಭವನದಲ್ಲಿ ಪೂರ್ವಾಹ್ನ 10:30ಕ್ಕೆ ಸಭೆ ನಡೆಯಲಿದ್ದು, ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.