ಪುತ್ತೂರು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪೆರುವಾಯಿ ಇಲ್ಲಿ ನಡೆದ ಉದಯಗಿರಿ ಕುದ್ದುಪದವು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಾಣಿಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಮಜಲು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಲಾವಣ್ಯ ಡಿ ನಾಯಕ್ 7ನೇ ತರಗತಿ ಹಿರಿಯ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ಕಥೆ ಹೇಳುವ ಸ್ಪರ್ಧೆ ಯಲ್ಲಿ ದ್ವಿತೀಯ ,ಮನೀಶ್ 7ನೇ ತರಗತಿ ಹಿರಿಯರ ವಿಭಾಗದ ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ,ಅನ್ವಿತ್ 6ನೇ ತರಗತಿ ಹಿರಿಯರ ವಿಭಾಗದ ಆಶುಭಾಷಣದಲ್ಲಿ ತೃತೀಯ, ಮಿಮಿಕ್ರಿ ಸ್ಪರ್ಧೆಯಲ್ಲಿ ತೃತೀಯ ,ತೀರ್ಥನ ಆರನೇ ತರಗತಿ ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ,ಸ್ಮಿತಾ ಯಸ್ ಕುಲಾಲ್ ಕಿರಿಯರ ವಿಭಾಗದ ಭಕ್ತಿಗೀತೆಯಲ್ಲಿ ದ್ವಿತೀಯ ಸ್ಥಾನ ರಿಷಿಕ ಕೆ ಮೂರನೇ ತರಗತಿ ಕಿರಿಯರ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ,ಸಪ್ತಮಿ ಕೆ ಆರ್ ಕಿರಿಯರ ವಿಭಾಗದ ಛದ್ಮವೇಶ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಲಾವಣ್ಯ ಡಿ ನಾಯಕ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.