ಕಾಣಿಯೂರು- ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕಬ್, ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಘವನ್ನು ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಧ್ವಜಾರೋಹಣ ಮತ್ತು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿ ವಿದ್ಯಾರ್ಥಿಗಳು ಇಂತಹ ಸಂಘಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೀವನದಲ್ಲಿ ಶಿಸ್ತು, ತಾಳ್ಮೆ ಆತ್ಮಸ್ಥೈರ್ಯ, ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವ ಮೂಲಕ ಸತ್ಪ್ರಜೆಯಾಗಿ ಬಾಳಬೇಕು ಎಂದರು. ವಿದ್ಯಾರ್ಥಿಗಳಿಗೆ ತರಬೇತುದಾರರಾದ ಪಂಜ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ, ಸುಳ್ಯ ತಾಲೂಕಿನ ಉತ್ತಮ ಸ್ಕೌಟ್ ಶಿಕ್ಷಕ ಪ್ರಶಸ್ತಿ ಪಡೆದಿರುವ, ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿರುವ ದಾಮೋದರ ನೇರಳ ಮಕ್ಕಳನ್ನು ಪ್ರೋತ್ಸಾಹಿಸಿ ಈ ಸಂಘದಲ್ಲಿರುವ ವಿದ್ಯಾರ್ಥಿಗಳು ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ಸಮಾಜಕ್ಕೆ ಮಾದರಿಯಾಗಬೇಕು ಎಂದರು.
ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಉಪಾಧ್ಯಕ್ಷೆ ಜ್ಞಾನೇಶ್ವರಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್, ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಹಿರಿಯ ಶಿಕ್ಷಕಿ ಸವಿತಾ ಕೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಟ್ರಸ್ಟಿ ಹರಿಚರಣ್ ರೈ ಮಾದೋಡಿ, ಸಹ ಆಡಳಿತಾಧಿಕಾರಿ ಹೇಮಾನಾಗೇಶ್ ರೈ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ ಮತ್ತು ಪೋಷಕರು ಉಪಸ್ಥಿತರಿದ್ದರು. ಫೋಕ್ ಲೀಡರ್ ಸುಚೇತ ಸ್ವಾಗತಿಸಿ, ಕಬ್ ಮಾಸ್ಟರ್ ರಚನ ವಂದಿಸಿದರು. ಗೈಡ್ ಕ್ಯಾಪ್ಟನ್ ವನಿತಾ ಕೆ ಎಸ್ ಕಾರ್ಯಕ್ರಮ ನಿರೂಪಿಸಿದರು.