ರಾಮಕುಂಜ: ತಾ| ಮಟ್ಟದ ಪ್ರೌಢಶಾಲಾ ಬಾಲಕ/ಬಾಲಕಿಯರ ಖೋ ಖೋ ಪಂದ್ಯಾಟ

0

ರಾಮಕುಂಜ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ ಇದರ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ/ಬಾಲಕಿಯರ ಖೋ ಖೋ ಪಂದ್ಯಾಟ ಸೆ.20ರಂದು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.


ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಅವರು ಉದ್ಘಾಟಿಸಿದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅಧ್ಯಕ್ಷತೆ ವಹಿಸಿದ್ದರು. ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಬಾರಿಂಜ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಗಾಯತ್ರಿ ಸ್ವಾಗತಿಸಿ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕಿ ಲೋಹಿತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿಯರಾದ ಪ್ರೇಮಾ ಬಿ., ದಿವ್ಯ ಪಿ.ಎನ್.ಹಾಗೂ ರಾಘವ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲೆಯ ಶಿಕ್ಷಕರು ಸಹಕರಿಸಿದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಪ್ರಾಯೋಜಕತ್ವದಲ್ಲಿ ತೀರ್ಪುಗಾರರಿಗೆ ಟೀ ಶರ್ಟ್ ಹಾಗೂ ಕ್ಯಾಪ್ ನೀಡಲಾಯಿತು.

ಬಾಲಕಿಯರ ವಿಭಾಗದಲ್ಲಿ ಬಿಳಿನೆಲೆ ಚಾಂಪಿಯನ್:
ಬಾಲಕಿಯರ ವಿಭಾಗದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ರಾಮಕುಂಜ ಕ್ಲಸ್ಟರ್ ಸಿಆರ್‌ಪಿ ಮಹೇಶ್, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಬಹುಮಾನ ವಿತರಿಸಿದರು. ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ನಡುವೆ ನಡೆದ ಫೈನಲ್ ಪಂದ್ಯ ಟೈಯಲ್ಲಿ ಅಂತ್ಯಗೊಂಡಿತು. ಈ ವೇಳೆಗೆ ರಾತ್ರಿಯಾಗಿದ್ದ ಹಿನ್ನೆಲೆಯಲ್ಲಿ ಸೆ.21ರಂದು ಫೈನಲ್ ಪಂದ್ಯವನ್ನು ಮತ್ತೆ ಆಡಿಸಲು ನಿರ್ಧರಿಸಲಾಗಿದೆ. ಬಾಲಕರ ವಿಭಾಗದಲ್ಲಿ 9 ಹಾಗೂ ಬಾಲಕಿಯರ ವಿಭಾಗದಲ್ಲಿ 7 ತಂಡಗಳು ಪಾಲ್ಗೊಂಡಿದ್ದವು.

LEAVE A REPLY

Please enter your comment!
Please enter your name here