ಕನ್ಯಾನ: ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಈಗಿನ ಕಾಲಘಟ್ಟದಲ್ಲಿ ಜನರಿಗೆ ಆರೋಗ್ಯದ ಬಗ್ಗೆ ಅರಿವು ಅತ್ಯಗತ್ಯ: ಕಣಿಯೂರು ಶ್ರೀ

ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ನಿರಂತರ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ: ಪ್ರವೀಣ್ ಕುಮಾರ್

ಇಂತಹ ಶಿಬಿರಗಳು ಗ್ರಾಮೀಣ ಭಾಗದ ಜನರಿಗೆ ಅವಶ್ಯಕ: ಪದ್ಮನಾಭ ಪೂಜಾರಿ ಸಣ್ಣಗುತ್ತು

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ವಿಟ್ಲ,ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೇನಾಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ, ಪ್ರಗತಿ ಬಂಧು -ಸ್ವಸಹಾಯ ಸಂಘಗಳ ಒಕ್ಕೂಟ ಕೇಪು ವಲಯ, ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಟ್ರಸ್ಟ್ ಕಣಿಯೂರು,‌ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವು ಕನ್ಯಾನದಲ್ಲಿರುವ ಶ್ರೀ ಗುರುದೇವ ಕಲ್ಯಾಣ ಮಂಟಪ ನಡೆಯಿತು.

ಕಾರ್ಯಕ್ರಮವನ್ನು ಕಣಿಯೂರು ಶ್ರೀ‌ ಚಾಮುಂಡೇಶ್ವರೀ‌ ದೇವೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿರವರು ದೀಪಬೆಳಗಿಸಿ ಉದ್ಘಾಟಿಸಿ, ಆಶೀರ್ವಚನ ನೀಡಿ ಸಮಾಜದಲ್ಲಿ ಜನರಿಗೆ ಅರೋಗ್ಯದ ಬಗ್ಗೆ ಅರಿವು ಪ್ರಸ್ತುತ ಸನ್ನಿವೇಶದಲ್ಲಿ ತೀರಾ ಅಗತ್ಯವಾಗಿದ್ದು, ಇಂತಹ ಉಚಿತ ಆರೋಗ್ಯ ಮಾಹಿತಿಗಳು ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ನಮ್ಮ ಆರೋಗ್ಯದ ಬಗ್ಗೆ ಹೆಚ್ವಿನ ಕಾಳಜಿ‌ ವಹಿಸುವುದರೊಂದಿಗೆ ಹಿತಮಿತದ ಆಹಾರ ನಮ್ಮ ಆರೋಗ್ಯವನ್ನ ಕಾಪಿಡುತ್ತದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಇಂತಹ ಹತ್ತು ಹಲವು ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿದೆ, ಪೂಜ್ಯರು ಬಡ ಜನರ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಎಂದು ತಿಳಿಸಿದರು. ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತುರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಇಂತಹ ಹಲವು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದೂ, ಇದರ ಪ್ರಯೋಜನ ನಾವೆಲ್ಲರೂ ಪಡೆಯೋಣ ಎಂದರು.


ವೇದಿಕೆಯಲ್ಲಿ ಯೇನಾಪೋಯ ವೈದ್ಯರಾದ ಡಾ| ಸ್ನೇಹ ಶೆಟ್ಟಿ, ದೇಲಂತಾಬಿಟ್ಟು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮನೋಜ್ ಕುಮಾರ್, ಕನ್ಯಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರಘುರಾಮ ಶೆಟ್ಟಿ ಕನ್ಯಾನ, ಕೇಪು ವಲಯದ ಮಾಜಿ ವಲಯಧ್ಯಕ್ಷರಾದ ಜಯಾನಂದ ಕಣಿಯೂರ್, ಒಕ್ಕೂಟದ ಅಧ್ಯಕ್ಷರುಗಳಾದ ಪೂವಪ್ಪ ಗೌಡ ಶಿರಾಂಕಲ್ಲು, ಕೃಷ್ಣ ನಾಯ್ಕ್, ದರ್ನಮ್ಮ, ಸುಜಾತ ಮೊದಲಾದವರು ಉಪಸ್ಥಿತರಿದ್ದರು. ಕೇಪು ವಲಯ ಮೇಲ್ವಿಚಾರಕ ಜಗದೀಶ್ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ಜ್ಞಾನದೀಪ‌ ಶಾಲಾ ಶಿಕ್ಷಕಿ ರೇಣುಕಾ ಕಣಿಯೂರ್ ವಂದಿಸಿದರು. ಉಚಿತ ಅರೋಗ್ಯ ತಪಾಸಣಾ ಶಿಬಿರದಲ್ಲಿ 300 ಕ್ಕೂ ಅಧಿಕಮಂದಿ ಭಾಗವಹಿಸಿ ಶಿಬಿರದ ಸದುಪಯೋಗ ಪಡಕೊಂಡರು.

LEAVE A REPLY

Please enter your comment!
Please enter your name here