ನಿಡ್ಪಳ್ಳಿ: ಶಾರದಾ ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಪಾಡಿ ಮಂಗಳೂರು,ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ , ಗ್ರಾಮ ಪಂಚಾಯತ್ ಬೆಟ್ಟಂಪಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಇದರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೆ.22 ರಂದು ಬೆಳಿಗ್ಗೆ ಗಂಟೆ 9.30 ರಿಂದ ಬೆಟ್ಟಂಪಾಡಿ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ದಯಾನಂದ ರೈ ಕೋರ್ಮಂಡ ಹಾಗೂ ಸಂಘಟಕರು ತಿಳಿಸಿದ್ದಾರೆ.
ಶಿಬಿರದಲ್ಲಿ ಸಿಗುವ ಮಾಹಿತಿಗಳು;
* ಯೋಗ ಮತ್ತು ಪ್ರಕೃತಿ ಚಿಕಿತ್ಸೆ
* ಸಮಾಲೋಚನೆ ಮತ್ತು ಆರೋಗ್ಯ ತಪಾಸಣೆ.
* ಆಹಾರ ಪದ್ದತಿ ಬಗ್ಗೆ ಮಾಹಿತಿ.
* ಮಧುಮೇಹ ತಪಾಸಣೆ.
* ಹೆಲ್ತ್ ಶಾಪ್