ನೆಕ್ಕಿಲಾಡಿ: ಗೋ ಹತ್ಯೆಗೈದು ಮಾಂಸ ತಯಾರಿ-96 ಕೆ.ಜಿ. ಮಾಂಸ, ಬೈಕ್, ರಿಕ್ಷಾ ಪೊಲೀಸ್ ವಶ

0

ಐವರು ಆರೋಪಿಗಳು ಪರಾರಿ

ಉಪ್ಪಿನಂಗಡಿ: ಇಲ್ಲಿನ ಸಮೀಪದ 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶನಗರ ಬಳಿಯ ಕಜೆ ಎಂಬಲ್ಲಿ ನಿವೇಶನವೊಂದರಲ್ಲಿ ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿಸುತ್ತಿದ್ದ ಕೃತ್ಯಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 96 ಕೆ.ಜಿ. ಗೋ ಮಾಂಸ, 1 ಬೈಕ್ , ಹಾಗೂ ಒಂದು ಆಟೋ ರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ಶನಿವಾರ ಸಂಭವಿಸಿದೆ.


ಕಜೆ ನಿವಾಸಿ ಖತಿಜಮ್ಮ ಎಂಬಾಕೆಯ ಒಡೆತನಕ್ಕೆ ಸೇರಿದ ಈ ನಿವೇಶನದಲ್ಲಿ ಅಕ್ರಮವಾಗಿ ಗೋ ಹತ್ಯೆ ನಡೆಸಲಾಗುತ್ತಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿತ್ತು. ಈ ವೇಳೆ ಸ್ಥಳದಲ್ಲಿದ್ದ ಐವರು ಆರೋಪಿಗಳು ಸಮೀಪದ ಕಾಡಿನತ್ತ ಓಡಿ ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಪರಾರಿಯಾಗಿರುವ ಆರೊಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿದ್ದ 96 ಕೆ.ಜಿ. ಗೋ ಮಾಂಸ, ಒಂದು ಬೈಕ್ ಹಾಗೂ ಒಂದು ಆಟೋ ರಿಕ್ಷಾವನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here