ಬಡಗನ್ನೂರು: ಉಚಿತ ಆರೋಗ್ಯ ಶಿಬಿರದ ಉದ್ಘಾಟನೆ

0

ಬಡಗನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಪುತ್ತೂರು ತಾಲೂಕು ಇದರ ವತಿಯಿಂದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ  ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಅರಿಯಡ್ಕ ವಲಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅರಿಯಡ್ಕ ವಲಯ ಮತ್ತು ಗ್ರಾಮ ಪಂಚಾಯತ್ ಬಡಗನ್ನೂರು ಇದರ ಸಹಕಾರದೊಂದಿಗೆ ಕೆ.ಎಮ್.ಸಿ ಹಾಸ್ಪಿಟಲ್ ಅತ್ತಾವರ ಮಂಗಳೂರು ಇಲ್ಲಿಯ ತಜ್ಞ ವೈದ್ಯರಿಂದ “ಉಚಿತ ಆರೋಗ್ಯ ತಪಾಸಣಾ’ ಕಾರ್ಯಕ್ರಮವು ಸೆ.22ರಂದು ಬೆಳಗ್ಗೆ ಗಂ 9ಕ್ಕೆ ಬಡಗನ್ನೂರು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು ಉದ್ಘಾಟಿಸಿ ಮಾತನಾಡಿ, ಮನುಷ್ಯನಿಗೆ ಆರೋಗ್ಯ ಪ್ರಮುಖವಾಗಿದೆ. ಗ್ರಾಮೀಣ ಪ್ರದೇಶದ ಜನರು ವಿವಿಧ ರೀತಿಯ ಅನಾರೋಗ್ಯದಿಂದ ತತ್ತರಿಸುವ ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಜನವರಿ ಸಹಕಾರಿಯಾಗುವ ನಿಟ್ಟಿನಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಸುತ್ತಿರುವುದು ಬಹಳಷ್ಟು ಸಂತೋಷಕರವಾಗಿದೆ. ಅನೇಕ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ಮಾಡಿಕೊಂಡು ಗ್ರಾಮೀಣ ಪ್ರದೇಶದ ಬಡವರ ಅಭಿವೃದ್ಧಿ ಸದಾ ಶ್ರಮಿಸುತ್ತಿದೆ. ಇಂದಿನ ಈ ಆರೋಗ್ಯ ಶಿಬಿರ ಪ್ರಯೋಜನ ಎಲ್ಲರೂ ಪಡೆದುಕೊಳ್ಳುವಂತೆ ಹೇಳಿದ ಅವರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಿ ಮಕ್ಕಳ ಸೌಂದರ್ಯ ವಿಕಾರದ ಬಗ್ಗೆ ಮಹತ್ವರ ಹೆಜ್ಜೆ ಇಡೋಣ ಎಂದು ಹೇಳಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದ ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆರವರು ಮಾತನಾಡಿ ಆರೋಗ್ಯವೇ ಭಾಗ್ಯ ಎಂಬಂತೆ ನಮ್ಮ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಬೇಕಾದ ಅನಿವಾರ್ಯತೆಯಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ, ಮಂಗಳೂರು ಅತ್ತಾವರ ಕೆ.ಎಂ.ಸಿ. ಆಸ್ಪತ್ರೆ  ಸಾರ್ವಜನಿಕ ಸಂಪರ್ಕ ಅಧಿಕಾರಿ, ಹರ್ಬಟ್ ಮಾರಿಯೋ ಪಿರೇರೊ, ಆರೋಗ್ಯ ಮಾಹಿತಿ ನೀಡಿದರು.

ವೇದಿಕೆಯಲ್ಲಿ  ಇ.ಎನ್.ಟಿ ತಜ್ಞ ಕಾರ್ತಿಕ್  ಅರಿಯಡ್ಕ ವಲಯ ಅ.ಕ.ಜಿ.ಜಾ. ವೇದಿಕೆ ವಲಯ ಅಧ್ಯಕ್ಷ  ವಿಕ್ರಂ ರೈ. ಸಾಂತ್ಯ, ಅರಿಯಡ್ಕ ವಲಯ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದ  ವಲಯಾಧ್ಯಕ್ಷ  ದಿನೇಶ್ ರೈ ಕುತ್ಯಾಳ, ಬಡಗನ್ನೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೋನಪ್ಪ ಕೆ, ಅರಿಯಡ್ಕ ವಲಯ ಭಜನಾ ಪರಿಷತ್ ವಲಯಾಧ್ಯಕ್ಷ ಗಂಗಾಧರ್ ರೈ ಎಂ.ಜಿ. ಬಡಗನ್ನೂರು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಎ ಒಕ್ಕೂಟ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ, ಬಡಗನ್ನೂರು ಗ್ರಾ.ಪಂ ನ ಮಾಜಿ ಉಪಾಧ್ಯಕ್ಷ ಸಂತೋಷ್ ಆಳ್ವ ಗಿರಿಮನೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರು, ಜ್ಞಾನವಿಕಾಸ ಒಕ್ಕೂಟದ ಸದಸ್ಯರು, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯ, ಅರಿಯಡ್ಕ ವಿಪತ್ತು ನಿರ್ವಹಣಾ ಘಟಕದ ಸದಸ್ಯರು  ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಅರಿಯಡ್ಕ ವಲಯ ಮೇಲ್ವಿಚಾರಕ ಹರೀಶ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಸಾವಿತ್ರಿ ಪೊನ್ನೆತ್ತಡ್ಕ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ  ಕಾವ್ಯಶ್ರೀ ಅಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಪಟ್ಟೆ ಒಕ್ಕೂಟದ ಅಧ್ಯಕ್ಷೆ ವಸಂತಿ, ಪಡುವನ್ನೂರು ಆಶಾ ಕಾರ್ಯಕರ್ತೆಯರಾದ ವಿಜಯಲಕ್ಷ್ಮಿ ಮೇಗಿನಮನೆ, ಹಾಗೂ ಸುಜಾತ ಏರಾಜೆ ಸಹಕರಿಸಿದರು. ಉಚಿತ ಆರೋಗ್ಯ ಶಿಬಿರದಲ್ಲಿ  (ಬಿ ಪಿ, ಶುಗರ್, ಇ.ಎನ್.ಟಿ ಎಲುಬು, ಕಣ್ಣಿನ ಪರೀಕ್ಷೆ ಇತ್ಯಾದಿ) ತಪಾಸಣೆ ನಡೆಯಿತು. ಸಮಾರು 150 ಕ್ಕೂ ಹೆಚ್ಚು ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here