ಪುತ್ತೂರು: ಮಾಸ್ ಲಿಮಿಟೆಡ್ನ ಸಹಯೋಗದೊಂದಿಗೆ ಅಡಿಕೆ ಖರೀದಿಯಲ್ಲಿ ಉಭಯ ಜಿಲ್ಲೆಗಳಲ್ಲಿ ಅತೀ ಹೆಚ್ಚು ವ್ಯವಹಾರವನ್ನು ಮಾಡಿ, ಪ್ರಥಮ ಸ್ಥಾನವನ್ನು ಪಡೆದಿರುವ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಾಸ್ ಲಿ.ಸಂಸ್ಥೆಯಿಂದ ಅಭಿನಂದಿಸಲಾಯಿತು. ಸೆ. 21 ರಂದು ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದ ಮಾಸ್ ಲಿ. ನ ವಾರ್ಷಿಕ ಮಹಾಸಭೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಮಾಸ್ ಲಿಮಿಟೆಡ್ನ ಅಧ್ಯಕ್ಷ ಸವಣೂರು ಸೀತಾರಾಮ ರೈ, ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಸಿಇಓ ಚಂದ್ರಶೇಖರ್ ಪಿಯವರಿಗೆ ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ಸ್ಮರಣಿಕೆ ನೀಡಿ ಮತ್ತು ಸವಣೂರು ಅಡಿಕೆ ಖರೀದಿ ಕೇಂದ್ರದ ಮಾಸ್ ಲಿಮಿಟೆಡ್ನ ಮುಖ್ಯಸ್ಥ ಯತೀಶ್ರವರಿಗೆ ಹಾರ ಹಾಕಿ ಸನ್ಮಾನಿಸಿ, ಗೌರವಿಸಲಾಯಿತು.
ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ನಿರ್ದೇಶಕರಾದ ಚೆನ್ನಪ್ಪ ಗೌಡ ನೂಜಿ, ಅಶ್ವಿನ್ ಎಲ್ ಶೆಟ್ಟಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿ ಮಾಜಿ ಸದಸ್ಯ ರಾಕೇಶ್ ರೈ ಕೆಡೆಂಜಿರವರು ಉಪಸ್ಥಿತರಿದ್ದರು.
ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಸ್ ಸಂಸ್ಥೆಯ ಅಡಿಕೆ ಅಡಿಕೆ ಖರೀದಿಯಲ್ಲಿ ಉಭಯ ಜಿಲ್ಲೆಗಳಲ್ಲಿ ಅತೀ ಹೆಚ್ಚು ವ್ಯವಹಾರವನ್ನು ಮಾಡಿ, ಪ್ರಥಮ ಸ್ಥಾನವನ್ನು ಪಡೆದು, ಪ್ರಶಸ್ತಿ ದೊರೆತಿರುವುದು ಹೆಮ್ಮೆಯ ವಿಚಾರವಾಗಿದೆ. ಮುಂದೆಯೂ ರೈತ ಸದಸ್ಯರು ತಮ್ಮ ಅಡಿಕೆ ಬೆಳೆಯನ್ನು ಮಾಸ್ ಸಂಸ್ಥೆಯೊಂದಿಗೆ ನೀಡಿ, ಪ್ರೋತ್ಸಾಹಿಸಿ.
ತಾರಾನಾಥ ಕಾಯರ್ಗ ಅಧ್ಯಕ್ಷರು
ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘ