ನೆಲ್ಯಾಡಿ: ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೆ.23ರಂದು ಬೆಳಿಗ್ಗೆ 10.30ಕ್ಕೆ ಸಂಘದ ಅಧ್ಯಕ್ಷ ಗುರುಪ್ರಸಾದ್ ಕೆ.ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಸಂಘದ ಸದಸ್ಯರು ಕಾರ್ಯಕಲಾಪದಲ್ಲಿ ಭಾಗವಹಿಸಿ ಸಹಕರಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಧ ಹೆಚ್.ಅವರು ತಿಳಿಸಿದ್ದಾರೆ.