ಪುತ್ತೂರು: ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಲಯನ್ಸ್ ಕ್ಲಬ್ ಪುತ್ತೂರು ಇದರ ವತಿಯಿಂದ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಪುತ್ತೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರ ಸೆ.22ರಂದು ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸುಧಾ ಶಿಬಿರವನ್ನು ಉದ್ಘಾಟಿಸಿ ಆರೋಗ್ಯ ಕಾಪಾಡುವ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಡಾ.ಆದರ್ಶ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಪ್ರೀತ ಹೆಗ್ಡೆ ಉಪಸ್ಥಿತರಿದ್ದರು. ಶೋಭ, ವಿದ್ಯಾ ಪ್ರಾರ್ಥಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷೆ ಪ್ರೇಮಲತಾ ರಾವ್ ಸ್ವಾಗತಿಸಿದರು. ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಅರವಿಂದ ಭಗವಾನ್ ವಂದಿಸಿದರು. ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷೆ ಗೌರಿ ಬನ್ನೂರು ಕಾರ್ಯಕ್ರಮ ನಿರ್ವಹಿಸಿದರು. ಸುಮಾರು 50 ಮಂದಿ ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದರು.