ನಿಡ್ಪಳ್ಳಿ; ಶಾರದಾ ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಪಾಡಿ ಮಂಗಳೂರು,ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ , ಗ್ರಾಮ ಪಂಚಾಯತ್ ಬೆಟ್ಟಂಪಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಬಿ.ಸಿ ಟ್ರಸ್ಟ್ ಇದರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೆ.22ರಂದು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.
ಎಂ ಜೆ ಎಫ್ ಲlಪವನರಾಮ್ ಶಿಬಿರ ಉದ್ಘಾಟಿಸಿ, ಲಯನ್ಸ್ ಕ್ಲಬ್ ನಡೆಸುತ್ತಿರುವ ಸಮಾಜ ಮುಖಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾರದಾ ಯೋಗ ಮತ್ತು ನ್ಯಾಚುರೋಪತಿ ವೈದ್ಯಕೀಯ ಕಾಲೇಜಿನ ವಸತಿ ವೈದ್ಯಕೀಯ ಅಧಿಕಾರಿ ಡಾ.ಶರತ್ ಮಾತನಾಡಿ ಮಧುಮೇಹ ಬರದಂತೆ ಮುನ್ನೆಚ್ಚರಿಕೆ ವಹಿಸುವ ಉಪಾಯಗಳ ಬಗ್ಗೆ ವಿವರಿಸಿದರು. ಬೆಟ್ಟಂಪಾಡಿಯ ಖ್ಯಾತ ವೈದ್ಯರಾದ ಡಾ.ಶ್ರೀಕೃಷ್ಣ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬೆಟ್ಟಂಪಾಡಿ ವಲಯ ಮೆಲ್ವೀಚಾರಕ ಸೋಹನ್ ಜಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕೆ, ಶಾರದಾ ಯೋಗ ಮತ್ತು ನ್ಯಾಚುರೋಪತಿ ವೈದ್ಯಕೀಯ ಕಾಲೇಜಿನ ವಸತಿ ವೈದ್ಯಕೀಯ ಅಧಿಕಾರಿ ಡಾ.ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಅಧ್ಯಕ್ಷ ದಯಾನಂದ ರೈ ಕೋರ್ಮಂಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ನವೀನ್ ಕುಮಾರ್ ಚೆಲ್ಯಡ್ಕ ವಂದಿಸಿದರು.ಪುತ್ತೂರು ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಕ್ಲಬ್ ಕೋಶಾಧಿಕಾರಿ ಜಲೀಲ್ ಬೈತ್ತಡ್ಕ , ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಸಹಕರಿಸಿದರು.
ಶಿಬಿರದಲ್ಲಿ ನೀಡಿದ ಮಾಹಿತಿಗಳಲ್ಲಿ ಮುಖ್ಯವಾಗಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಸಮಾಲೋಚನೆ ಮತ್ತು ಆರೋಗ್ಯ ತಪಾಸಣೆ, ಆಹಾರ ಪದ್ದತಿ ಬಗ್ಗೆ ಮಾಹಿತಿ, ಮಧುಮೇಹ ತಪಾಸಣೆ ಮತ್ತು ಹೆಲ್ತ್ ಶಾಪ್ ಈ ರೀತಿಯಲ್ಲಿ ಪರೀಕ್ಷೆ ಮತ್ತು ಮಾಹಿತಿ ಮಾರ್ಗದರ್ಶನ ನೀಡಲಾಯಿತು. ಈ ಶಿಬಿರದಲ್ಲಿ ಸುಮಾರು 70 ಮಂದಿ ಪ್ರಯೋಜನ ಪಡೆದುಕೊಂಡರು.