ಉಪ್ಪಿನಂಗಡಿ: ಗೋಳಿತ್ತಡಿ ಹಾಲು ಉತ್ಪಾದಕರ ಸಹಕಾರ ಸಂಘ ರಾಮಕುಂಜ ಇದರ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.24ರಂದು ನಡೆಯಲಿದೆ.
ಬೆಳಗ್ಗೆ 9.30ಕ್ಕೆ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಪೂವಪ್ಪ ಗೌಡ ಎಸ್. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಕೇಶವ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.