ಪುತ್ತೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ(ಮೆಸ್ಕಾಂ)ಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸೆ.27ರಿಂದ 29ರ ತನಕ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕಂಬ ಹತ್ತುವ ತರಬೇತಿ ಶಿಬಿರವನ್ನು ವಿಧಾನ ಪರಿಷತ್ ಉಪಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ರಾಜ್ಯ ಸರಕಾರ ಹಾಗೂ ಕ.ವಿ.ಪ್ರ.ನಿ.ನಿ ನಿರ್ದೇಶನಗಳ ಅನುಸಾರ ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಮೆಸ್ಕಾಂ ವ್ಯಾಪ್ತಿಯಲ್ಲಿ ಸ್ಥಳೀಯ ಅಭ್ಯರ್ಥಿಗಳ ನೇಮಕಾತಿ ಮಾಡಬೇಕೆಂಬ ಉದ್ಧೇಶದಿಂದ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ಸ್ಥಳೀಯ ಅರ್ಹ ಅಭ್ಯರ್ಥಿಗಳಿಗೆ ವಿದ್ಯುತ್ ಕಂಬ ಹತ್ತುವ ತರಬೇತಿ ಶಿಬಿರವನ್ನು ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಆದರೆ ಇದೀಗ ವಿಧಾನ ಪರಿಷತ್ತು ಉಪಚುನಾವಣಾ ನೀತಿ ಸಂಹಿತ ಜಾರಿಯಾಗಿರುವ ಹಿನ್ನಲೆಯಲ್ಲಿ ಸದರಿ ತರಬೇತಿ ಶಿಬಿರ ಕಾರ್ಯಾಗಾರವನ್ನು ಮುಂದೂಡಲಾಗಿದ್ದು. ಸದರಿ ಚುನಾವಣಾ ನೀತಿ ಸಂಹಿತ ಮುಕ್ತಾಯಗೊಂಡ ಬಳಿಕ ತರಬೇತಿ ಶಿಬಿರವನ್ನು ಮರು ಆಯೋಜಿಸಲಾಗುವುದು. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.