2023-24 ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿಗೆ ಗೌರವಾರ್ಪಣೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಮಂಗಳೂರು, ಹಲವಾರು ವಿಷಯವಾರು ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆಯಲ್ಲಿ ಸೆ.22ರಂದು ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ 2024 ಕಾರ್ಯಕ್ರಮದಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ 100ಕ್ಕೆ 100 ಶೇಕಡಾ ಫಲಿತಾಂಶ ಪಡೆದು ವಿಶೇಷ ಸಾಧನೆ ಮಾಡಿದ ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಅನ್ನು ಗೌರವಿಸಲಾಯಿತು.

ಪುತ್ತೂರು ತಾಲೂಕಿನ ಏಕೈಕ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಇದಾಗಿದ್ದು ಕೆಲವೊಂದು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಹೊಂದಿದ್ದರೂ ಕಾಲೇಜು ಅಭಿವೃದ್ಧಿ ಸಮಿತಿ, ಹೆತ್ತವರ ಸಹಕಾರ ಮತ್ತು ಪ್ರೋತ್ಸಾಹದೊಂದಿಗೆ ಈ ವಿಶೇಷ ಸಾಧನೆ ಗೈದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here