ಪುತ್ತೂರು: ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ವೇದಿಕೆ, ಮರಾಟಿ ಯುವ ವೇದಿಕೆ ಕೊಂಬೆಟ್ಟು, ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸಂಘದ ಪದಾಧಿಕಾರಿಗಳಿಗೆ, ಸದಸ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಒಂದು ದಿನದ ನಾಯಕತ್ವ ಹಾಗೂ ಸಂಸದೀಯ ನಡಾವಳಿ ವಿಷಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾತೃ ಸಂಘದ ಅಧ್ಯಕ್ಷ ಎನ್ ದುಗ್ಗಪ್ಪ ನಾಯ್ಕ ಬಡಾವು ಮಾತನಾಡಿ, ಸಮಾಜದ ಎಲ್ಲರೂ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುವುದರಿಂದ ವೈಯಕ್ತಿಕ ಹಾಗೂ ಸಾಮಾಜಿಕ ಮನೋವಿಕಾಸಗೊಂಡು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಾಧ್ಯವಾಗುತ್ತದೆ ಎಂದರು.
ಮಾತೃ ಸಂಘದ ಪೂರ್ವಾಧ್ಯಕ್ಷ ಡಾ. ಗೋವಿಂದ ನಾಯ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವಲಯ ತರಬೇತುದಾರ ಜೇಸಿಐ ಸೆನೆಟರ್ ಪ್ರದೀಪ್ ಬಾಕಿಲ ತರಬೇತಿಯನ್ನು ನಡೆಸಿಕೊಟ್ಟರು.
ಸಂಘದ ಕೋಶಾಧಿಕಾರಿ ಮೋಹನ್ ನಾಯ್ಕ ಎಂ, ಮರಾಟಿ ಮಹಿಳಾ ವೇದಿಕೆ ಅಧ್ಯಕ್ಷೆ ಮೀನಾಕ್ಷಿ ಮಂಜುನಾಥ ಎನ್ ಎಸ್, ಮರಾಟಿ ಯುವ ವೇದಿಕೆ ಅಧ್ಯಕ್ಷ ವಸಂತ ನಾಯ್ಕ ಆರ್ಯಾಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮರಾಟಿ ಮಹಿಳಾ ವೇದಿಕೆ ಸಂಚಾಲಕಿ ಸಾವಿತ್ರಿ ಶೀನಪ್ಪ ನಾಯ್ಕ ಪ್ರಾರ್ಥಿಸಿದರು. ಕಾರ್ಯದರ್ಶಿ ಶೀನಪ್ಪ ನಾಯ್ಕ ಸ್ವಾಗತಿಸಿ ತರಬೇತುದಾರರನ್ನು ಪರಿಚಯಿಸಿದರು. ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ ಎನ್ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮರಾಟಿ ಮಹಿಳಾ ವೇದಿಕೆ ಸಂಚಾಲಕಿ ಯಮುನಾ ಪಟ್ಟೆ ವಂದಿಸಿದರು.
ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು, ಮರಾಟಿ ಮಹಿಳಾ ವೇದಿಕೆ,ಮರಾಟಿ ಯುವ ವೇದಿಕೆ ಹಾಗೂ ಮಾತೃ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಕಿಶೋರಿ.ಡಿ.ನಾಯ್ಕ್, ಗಂಗಾಧರ ಕೌಡಿಚ್ಚಾರ್ ಮತ್ತು ಅನುಶ್ರೀ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅದೃಷ್ಟ ಚೀಟಿ ಎತ್ತುವ ಮೂಲಕ ಮನೋರಂಜನಾ ಆಟ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.