ಪುತ್ತೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಿಧನರಾದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರಿಗೆ ಪುತ್ತೂರು ತಾಲೂಕು ಗುತ್ತಿಗೆದಾರರ ಸಂಘದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.
ನಗರದ ಬೊಳುವಾರಿನಲ್ಲಿರುವ ಉದಯಗಿರಿ ಸಭಾಂಗಣದಲ್ಲಿ, ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಧಾಕೃಷ್ಣ ನಾೖಕ್, ಮತ್ತು ಪುತ್ತೂರು ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಗಿರೀಶ್ ಕೆ ಎಸ್ ಉಪಸ್ಥಿತಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಮಂಜುನಾಥ್ ಶೇಖ, ರಾಜೇಶ್ ರೈ, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ರಫಿ ಮುಕ್ವೆ ಸೇರಿದಂತೆ ಗುತ್ತಿಗೆದಾರರ ಸಂಘದ ಸರ್ವ ಸದಸ್ಯರು ಭಾಗವಹಿದ್ದರು.