ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ 3 ನೇ ಶಕ್ತಿಕೇಂದ್ರದ ಪ್ರಮುಖರಾಗಿ ಸದಾನಂದ ಗೌಡ ಸೇರಾಜೆರವರನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ನೇಮಿಸಿದ್ದಾರೆ.
ಸದಾನಂದ ಗೌಡ ಸೇರಾಜೆರವರು ವಿಟ್ಲ ಬಿಜೆಪಿ ನಗರ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ, ಯುವಕ ಮಂಡಲ (ರಿ) ವಿಟ್ಲ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಹಾಗೂ ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಸಂಸ್ಥೆಯ ಮಾಜಿ ನಿರ್ದೇಶಕರಾಗಿ ಹಾಗೂ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ,ಯಕ್ಷದ್ರುವ ಪಟ್ಲ ಫೌಂಡೇಶನ್ ನ ವಿಟ್ಲ ವಲಯ ಮಾಜಿ ಸಂಘಟನಾ ಕಾರ್ಯದರ್ಶಿಯಾಗಿ,ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ ವಿಟ್ಲ ಶಾಖಾ ಸಲಹಾ ಸಮಿತಿ ಸದಸ್ಯರಾಗಿ ಮಾತ್ರವಲ್ಲದೆ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.
ಇದೀಗ ಇವರನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ 3 ನೇ ಶಕ್ತಿಕೇಂದ್ರದ ಪ್ರಮುಖರಾಗಿ ಸದಾನಂದ ರವರನ್ನು ಆಯ್ಕೆ ಮಾಡಲಾಗಿದೆ.